ಜೂನ್ 14ರ ಬಳಿಕ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ

ಕುಂದಾಪುರ: ಜೂ. 14ರ ಬಳಿಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ರಾತ್ರಿ, ವೀಕೆಂಡ್ ಕರ್ಫ್ಯೂ ಜಾರಿ

ಜೂನ್ 14ರ ಬಳಿಕ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯುವುದಿಲ್ಲ, ಬದಲಾಗಿ ಸಡಿಲಿಕೆ ನೀಡಲಾಗಿದೆ. ಸಂಜೆ 7ರಿಂದ ಬೆಳಗ್ಗೆ 5ರ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ, ರವಿವಾರಗಳಂದು ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರದೆ. ಶುಕ್ರವಾರ ಸಂಜೆ 7 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಎಲ್ಲಾ ನಿರ್ಮಾಣ ಕಾರ್ಯಗಳಿಗೆ ಅನುಮತಿ ನೀಡಲಾಗಿದ್ದು, ಸ್ಟೀಲ್, ಸಿಮೆಂಟ್ ಅಂಗಡಿ ಗಳಿಗೆ ಅವಕಾಶವಿದೆ. ಫ್ಯಾಕ್ಟರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗಳನ್ನು ಬಳಸಲು ಅವಕಾಶ ನೀಡಲಾಗಿದ್ದು, ಗಾರ್ಮೆಂಟ್ಸ್ ಆರಂಭಿಸಲು ಅವಕಾಶ ನೀಡಲಾಗಿದ್ದು ಶೇ. 30ರಷ್ಟು ಸಿಬ್ಬಂದಿಗಳು ಮಾತ್ರ.

ಆಟೋ ಟ್ಯಾಕ್ಸಿಗಳಲ್ಲಿ ಇಬ್ಬರು ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರಕ್ಕೆ ಜಿಲ್ಲೆಯಲ್ಲಿ ಅವಕಾಶವಿಲ್ಲ ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈ ನಿಯ ಜಾರಿಗೆ ಬರಲಿದೆ.

www.kharvionline.com

Leave a Reply

Your email address will not be published. Required fields are marked *