ಇಷ್ಟಕ್ಕೆ ನಿಲ್ಲಲ್ಲ ಮಳೆರಾಯನ ಆರ್ಭಟ, ಇನ್ನೂ ಮೂರ್ನಾಲ್ಕು ದಿನ ಇದೇ ಕಾಟ…

ರಾಜ್ಯದ ಎಲ್ಲ ಭಾಗಗಳಲ್ಲೂ ಮುಂಗಾರು ಚುರುಕಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದ್ದು ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

www.kharvionline.com

Leave a Reply

Your email address will not be published. Required fields are marked *