ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಜೂನ್ 21ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ, ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ವರೆಗೆ ರೆಡ್ ಅಲರ್ಟ್ ಘೋಷಿಸಿರುವ ಇಲಾಖೆ ಇದರ ಜೊತೆಯಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಕೂಡ ಮುಂದಿನ ದಿನಗಳಲ್ಲಿ ಸಾರುವ ಮೂಲಕ 3, 4 ದಿನಗಳ ನಿರಂತರವಾಗಿ ಕರಾವಳಿ ಮಳೆಯಾಗಲಿದೆ ಎಂದು ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 45ರಿಂದ 55 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ.