ಉಡುಪಿ: ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕೆಳಗಿಳಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅನ್ ಲಾಕ್ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ
ಜಾರಿಯಲ್ಲಿರುತ್ತದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ.
ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ 50% ರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ, ಬಸ್ ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಭಂಧಿಸಲಾಗಿದೆ.
ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ಸಿಬ್ಬಂದಿ ಸಾಮರ್ಥ್ಯದ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ. ಆದಾಗ್ಯೂ ಉಡುಪು(Garment) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.
ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಪ್ರತಿ ದಿನ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆ ಯವರೆಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು, ವಾಣಿಜ್ಯ ಸಂಕೀರ್ಣ, ಮಾಲ್ ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ. ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್ ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲಾ ವಸ್ತುಗಳ 24×7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಎಲ್ಲಾ ಅಂಗಡಿಗಳಲ್ಲಿ ಮಾಲಿಕರು /ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್ ಧರಿಸುವದು ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಮಾರ್ಕುಗಳನ್ನು ಹಾಕುವುದು ಕಡ್ಡಾಯವಾಗಿದೆ.ಯಾವುದೇ ಅಂಗಡಿಯಲ್ಲಿ ಜನ ಜಂಗುಳಿ ಇರತಕ್ಕದ್ದಲ್ಲ.ತಲ್ಲಪಿದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ಕೋವಿಡ್ ಮುಗಿಯುವ ತನಕ ಅಮಾನತ್ತಿನಲ್ಲಿಡಲಾಗುವುದು)
ವಾಕಿಂಗ್ ಮತ್ತು ಜಾಗಿಂಗ್ ಗಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಉದ್ಯಾನವನಗಳನ್ನು ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ.
ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮರ್ಥ್ಯದೊಂದಿಗೆ ಲಾಡ್ಜ್ ಗಳು ಮತ್ತು ರೆಸಾರ್ಟ್ ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು).
ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.
ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.