ಶ್ರೀ ಡಿ.ಕೆ.ಶಿವಕುಮಾರ್ ರವರು ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ.
ಕುಂದಾಪುರ: ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರು ಇಂದು ಸಂಜೆ ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನವರ ದರ್ಶನ ಪಡೆದರು. ದೇವಸ್ಥಾನ ಅಧ್ಯಕ್ಷರಾದ ಶ್ರೀಯುತ ಜಯನಂದ ಖಾರ್ವಿ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಶ್ರೀ ಡಿ. ಕೆ. ಶಿವಕುಮಾರ್ ರವರನ್ನು ಸ್ವಾಗತಿಸಿ ಗೌರವಿಸಿದರು. ಸ್ಥಳೀಯ ಪುರಸಭಾ ಸದಸ್ಯರಾದ ಶ್ರೀ ಚಂದ್ರಶೇಖರ ಖಾರ್ವಿಯವರು ಮತ್ತು ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹೊನ್ನಾವರ ಕಾಸರಕೋಡ ಟೊಂಕದ ಖಾಸಗಿ ವಾಣಿಜ್ಯ ಬಂದರು ನಿರ್ಮಾಣದಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಶ್ರೀ ಡಿ. ಕೆ. ಶಿವಕುಮಾರ್ ರವರಲ್ಲಿ ಪ್ರಸ್ತಾಪನೆ ಮಾಡಲಾಯಿತು. ಶ್ರೀ ಯುತರು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ವರದಿ : kharvionline.com
ನಂತರ ನಡೆದ ಸರಳವಾದ ಸಭೆಯಲ್ಲಿ ಮಹಾಕಾಳಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಾದ ಕೇಶವ ಖಾರ್ವಿ ಸ್ವಾಗತಿಸಿದರು. ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಾನಂದ ಖಾರ್ವಿಯವರು ಮಾತಾನಾಡಿ ಕೊಂಕಣಿ ಖಾರ್ವಿ ಸಮಾಜದ ಬಗ್ಗೆ ಚುಟುಕಾಗಿ ವಿವರಿಸಿ, ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಮ್ಮ ಸಮಾಜದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಎಳೆ ಎಳೆಯಾಗಿ ತಿಳಿಸಿ, ನಮ್ಮ ಸಮಾಜದ ಧ್ವನಿಯಾಗಿ ನಮ್ಮ ಕಾಸರಕೋಡುವಿನಲ್ಲಿ ಆಗುತ್ತಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿ ಕೊಟ್ಟು,ಮೀನುಗಾರರ ಬದುಕು ಹಸನಾಗುವಂತೆ ಮಾಡಬೇಕು ಎಂದು ಮನವಿಯನ್ನು ಮಾಡಿಕೊಂಡರು.ನಾಳೆ ದಿನ ಭೇಟಿ ನೀಡುತ್ತೇನೆ ಸಮಸ್ಯೆಯ ಬಗ್ಗೆ ಅರಿತುಕೊಂಡು ನಿಮ್ಮ ನೋವಿಗೆ ಸ್ಪಂದಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.