ಕಲಿಕಾ ಚೇತರಿಕೆ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಉಡುಪಿ ಜಿಲ್ಲೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ವಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇದರ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
SDMC ಅಧ್ಯಕ್ಷರಾದ ಶ್ರೀ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ್ ಖಾರ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಸಿ.ಎಸ್ ಕಾಂತರಾಜು ಈ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ದೇಶದ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಾ ಪೂಜಾರಿ, ಇಸ್ರೋ ನಿವೃತ್ತ ವಿಜ್ಞಾನಿ ಸುರೇಶ್ ಕಾರ್ಣಿಕ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ದಿವಾಕರ ಎನ್ ಖಾರ್ವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಕ್ಷೇತ್ರ ಸಮನ್ವಯ ಅಧಿಕಾರಿ ಅಶೋಕ್ ನಾಯ್ಕ್ ಕಲಿಕಾ ಹಬ್ಬದ ನೋಡಲ್ ಅಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ಬಿಆರ್ ಪಿ ಮಿಲ್ಟನ್ ರೋಹಿತ್ ಕ್ರಾಸ್ತಾ ಶಿಕ್ಷಣ ಸಂಯೋಜಕ ಶೇಖರ್, ಕುಂದಾಪುರ ವಲಯದ ಸಿ ಆರ್ ಪಿ ಮತ್ತು ಬಿ ಆರ್ ಪಿ ಗಳು ಮತ್ತು ಪತ್ರಕರ್ತ ರಾಘವೇಂದ್ರ ಪೈ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಉಮೇಶ್ ಕುಂದರ್ ಸ್ವಾಗತಿಸಿದರು.ಸಹಶಿಕ್ಷಕ ಶಿವಶಂಕರ ಎಚ್ ಎಂ ಕಾರ್ಯಕ್ರಮ ನಿರ್ವಹಣೆ ಮಾಡಿದರು.ಸಿ ಆರ್ ಪಿ ಶಂಕರ ಶೆಟ್ಟಿ ವಂದಿಸಿದರು.
ವರದಿ: kharvionline.com