ಜುಲೈ 9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಎಂಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *