ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಅಕ್ಟೋಬರ್ 3 ರಿಂದ 12 ರ ತನಕ ಜರುಗಲಿರುವುದು. ಅ.3 ರಂದು ಸಂಜೆ ಸ್ಥಳೀಯ ಭಜನಾ ಮಂಡಳಿಯವರಿಂದ ಭಜನೆರಾತ್ರಿ 7.30 ಕ್ಕೆ ಕಲಶ ಸ್ಥಾಪನೆ, ಪ್ರಾರ್ಥನೆ, ಮಹಾಪೂಜೆ, ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ ನಡೆಯಲಿದೆ.

ಅಕ್ಟೋಬರ್ 4 ರಿಂದ 11 ರ ವರೆಗೆ ಪ್ರತಿದಿನ ಸಂಜೆ 6.30 ಕ್ಕೆ ಸ್ಥಳೀಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ,ರಾತ್ರಿ 8 ರಿಂದ ಮಹಾಪೂಜೆ,ಅಷ್ಟಾವಧಾನ ಸೇವೆ,ಪ್ರಸಾದ ವಿತರಣೆ ನಡೆಯಲಿರುವುದು. ಅ.5 ಸ್ವಾತಿ ನಕ್ಷತ್ರ ಪ್ರಯುಕ್ತ ಬೆಳಿಗ್ಗೆ 6 ಗಂಟೆಗೆ ಕದಿರು ಪೂಜೆ ಹೊಸತು ಆಚರಣೆ ಪ್ರಯುಕ್ತ ಭಕ್ತಾದಿಗಳಿಗೆ ಕದಿರು ವಿತರಣೆ ನಡೆಯಲಿದೆ.

ಅ.11 ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಚಂಡಿಕಾ ಹೋಮ, ಪೂರ್ಣಾಹುತಿ, ಪಲ್ಲಪೂಜೆ, ವಿಶೇಷ ಅಲಂಕಾರ ಪೂಜೆ, ತೀರ್ಥಪ್ರಸಾದ ವಿತರಣೆ ಬಳಿಕ ಸೇವಾಕರ್ತರಿಂದ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 12 ರಂದು ವಿಜಯದಶಮಿ ಪ್ರಯುಕ್ತ ಸಂಜೆ 5.30 ರಿಂದ ವಿಶೇಷ ರಂಗಪೂಜೆ, 6.30 ರ ಗೋಧೂಳಿ ಮೂಹೂರ್ತದಲ್ಲಿ ಶ್ರೀ ಮಹಾಕಾಳಿ ಅಮ್ಮನವರ ಪುಷ್ಪಾಲಂಕೃತ ಪಲ್ಲಕ್ಕಿ ಉತ್ಸವದ ಪುರಮೆರವಣಿಗೆಯು ಕುಂದಾಪುರ ಮುಖ್ಯ ರಸ್ತೆಯ ಮಾರ್ಗವಾಗಿ ಪಾರಿಜಾತ ಸರ್ಕಲ್ ತಿರುಗಿ ,ಖಾರ್ವಿ ಮೇಲ್ಕೇರಿ ರಸ್ತೆಯಲ್ಲಿರುವ ಶ್ರೀ ನಾಗ ಜಟ್ಟೀಗೇಶ್ವರ ದೇವಸ್ಥಾನಕ್ಕೆ ಹೋಗಿ ಅಲ್ಲಿ ವಿಶೇಷ ಪೂಜೆ,ಪ್ರಸಾದ ವಿತರಣೆಯೊಂದಿಗೆ ನವರಾತ್ರಿ ಉತ್ಸವ ಸಂಪನ್ನಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

www.kharvionline.com

Leave a Reply

Your email address will not be published. Required fields are marked *